alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನತೆಗೆ ಗೌರಿ ಹಬ್ಬದ ವೇಳೆ ಸಿಗಲಿದೆ ‘ಸಿಹಿ ಸುದ್ದಿ’

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಾಟಿ ಕಾರ್ಯ ಮಾಡಿದ್ದು, ಬಳಿಕ ನಡೆದ ಸಮಾರಂಭದಲ್ಲಿ ಮಹತ್ವದ ವಿಷಯವೊಂದನ್ನು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

ಗೌರಿ-ಗಣೇಶ ಹಬ್ಬದ ವೇಳೆ ರಾಜ್ಯದ ಜನತೆಗೆ ಶುಭ ಸುದ್ದಿಯೊಂದನ್ನು ನೀಡುವುದಾಗಿ ಕುಮಾರಸ್ವಾಮಿಯವರು ಹೇಳಿದ್ದು, ಆ ವೇಳೆ ಸರ್ಕಾರದಿಂದ ಬಹು ದೊಡ್ಡ ಯೋಜನೆಯೊಂದು ಘೋಷಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರೈತರಿಗೂ ಆತ್ಮಸ್ಥೈರ್ಯ ತುಂಬಿದ ಮುಖ್ಯಮಂತ್ರಿಗಳು, ರಾಜ್ಯದ ಯಾವುದೇ ರೈತರು ಆತ್ಮಹತ್ಯೆಗೆ ಶರಣಾಗಬೇಡಿ. ನಿಮ್ಮ ನೆರವಿಗೆ ಸರ್ಕಾರ ಬರಲಿದೆ. ಮುಂದಿನ ದಿನಗಳಲ್ಲಿ ಬಡ್ಡಿ ರಹಿತವಾಗಿ ರೈತರಿಗೆ ಸಾಲ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...