alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಕೊಳ್ಳೋದು ನಾಯಕರಿಗೆ ಬಿಟ್ಟಿದ್ದು : ಕುಮಾರಸ್ವಾಮಿ ಸ್ಪಷ್ಟನೆ

ನೂತನ ಸಿಎಂ ಆಗಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮೇ 23ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭೇಟಿಯಾಗಿ, ಮಾತುಕತೆ ನಡೆಸಲಿದ್ದಾರಂತೆ ಸರ್ಕಾರ 5 ವರ್ಷದವರೆಗೆ ಯಶಸ್ವಿಯಾಗಿ ನಡೆಯಲಿ ಎಂದು ಕುಮಾರಸ್ವಾಮಿ ಆಶೀರ್ವಾದ ಪಡೆಯಲಿದ್ದಾರಂತೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆಯೂ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರಂತೆ. ಪದಗ್ರಹಣ ಸಮಾರಂಭಕ್ಕೆ ಸೋನಿಯಾ, ರಾಹುಲ್ ಸೇರಿದಂತೆ ಹಿರಿಯ ನಾಯಕರಿಗೆ ಆಹ್ವಾನ ನೀಡಲು ಅವ್ರು ದೆಹಲಿಗೆ ತೆರಳಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ.

ಜೆಡಿಎಸ್ ಶಾಸಕರನ್ನು ರಕ್ಷಣೆ ಮಾಡುವುದು ನಮ್ಮ ಹೊಣೆ. ಆದ್ರೆ ಕಾಂಗ್ರೆಸ್ ಶಾಸಕರನ್ನು ತಮ್ಮಲ್ಲಿಯೇ ಹಿಡಿದಿಟ್ಟುಕೊಳ್ಳುವುದು ಕಾಂಗ್ರೆಸ್ ನಾಯಕರ ಹೊಣೆ. ಹಾಗಾಗಿ ಕಾಂಗ್ರೆಸ್ ಶಾಸಕರು ತಮ್ಮ ಶಾಸಕರ ಮೇಲೆ ಕಣ್ಣಿಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಹೋದ್ರೆ ಜೆಡಿಎಸ್ ಏನೂ ಮಾಡುವುದಿಲ್ಲವೆಂದು ಕುಮಾರಸ್ವಾಮಿ ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...