alex Certify
ಕನ್ನಡ ದುನಿಯಾ       Mobile App
       

Kannada Duniya

‘ಅವರು ರೆಸಾರ್ಟಾನ್ನಾದ್ರೂ ಮಾಡ್ಲಿ ಗುಡಿಸಲನ್ನಾದ್ರೂ ಮಾಡ್ಲಿ’

ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ನಡೆಯುತ್ತಿರುವ ಪ್ರಯತ್ನಗಳ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿಯವರು ಕೆಲ ಶಾಸಕರಿಗೆ ಹಣದ ಆಮಿಷವೊಡ್ಡುತ್ತಿರುವುದು ನನಗೆ ಗೊತ್ತಿದೆ. ಆದರೆ ಅವರ ಪ್ರಯತ್ನ ಫಲಿಸುವುದಿಲ್ಲವೆಂದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶಾಸಕರನ್ನು ಸೆಳೆಯಲು ಬಿಜೆಪಿಯವರು ಅಡ್ವಾನ್ಸ್ ಪೇಮೆಂಟ್ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆಂಬುದು ನನಗೆ ಗೊತ್ತಿದೆ. ಅವರು ರೆಸಾರ್ಟ್ ನ್ನಾದರೂ ಮಾಡಲಿ ಗುಡಿಸಲನ್ನಾದರೂ ಮಾಡಲಿ ಎಂದು ಪರೋಕ್ಷವಾಗಿ ಯಾರ ಹೆಸರನ್ನು ಉಲ್ಲೇಖಿಸದೆ ಹೇಳಿರುವ ಕುಮಾರಸ್ವಾಮಿಯವರು, ಸರ್ಕಾರ ಉಳಿಸಿಕೊಳ್ಳಲು ಏನು ಬೇಕೋ ಅದನ್ನು ನಾನು ಮಾಡುತ್ತೇನೆ ಎಂದಿದ್ದಾರೆ.

ಜಾರಕಿಹೊಳಿ ಸಹೋದರರೂ ಸೇರಿದಂತೆ ಎಲ್ಲ ಸಚಿವರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಕೆಲ ಶಾಸಕರ ಜೊತೆಯೂ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ ಕುಮಾರಸ್ವಾಮಿಯವರು, ಸರ್ಕಾರವನ್ನು ಉರುಳಿಸುವ ಬಿಜೆಪಿಯವರ ಪ್ರಯತ್ನ ಫಲ ನೀಡುವುದಿಲ್ಲ ಎಂದು ಹೇಳಿದರು. ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ವರಿಷ್ಠರು ಯಾವಾಗ ದಿನ ನಿಗದಿ ಮಾಡುತ್ತಾರೋ ಅಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...