alex Certify
ಕನ್ನಡ ದುನಿಯಾ       Mobile App
       

Kannada Duniya

ಏ. 5 ರಂದು ಶಿಕಾರಿಪುರಕ್ಕೆ ವಿಕಾಸಪರ್ವ ಯಾತ್ರೆ

ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ವಿಕಾಸಪರ್ವ ಯಾತ್ರೆ ಏ.5 ರ ನಾಳೆ ಬೆಳಗ್ಗೆ 11 ಗಂಟೆಗೆ ಶಿಕಾರಿಪುರಕ್ಕೆ ಆಗಮಿಸಲಿದೆ.

ಬಿಜೆಪಿ ಭದ್ರಕೋಟೆಯಾಗಿರುವ ಶಿಕಾರಿಪುರಕ್ಕೆ ಯಾತ್ರೆ ಆಗಮಿಸುತ್ತಿದ್ದು, ಹಳೆ ಸಂತೆಮೈದಾನದಲ್ಲಿ ಹಮ್ಮಿಕೊಂಡಿರುವ ಬಹಿರಂಗ ಸಭೆಗೆ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಸುಮಾರು 50 ಸಾವಿರ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಈ ಸಭೆಯಲ್ಲಿ ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ಪಿಜಿಆರ್ ಸಿಂಧ್ಯಾ, ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ.ಫಾರೂಕ್, ಘೋಷಿತ ಅಭ್ಯರ್ಥಿಗಳಾದ ಹೆಚ್.ಟಿ. ಬಳಿಗಾರ್, ಆರ್.ಎಂ. ಮಂಜುನಾಥಗೌಡ, ಶಾಸಕರಾದ ಮಧುಬಂಗಾರಪ್ಪ, ಶಾರದಾ ಪೂರ್ಯನಾಯ್ಕ, ಮುಖಂಡ ಎಂ.ಶ್ರೀಕಾಂತ್ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.

15 ದಿನಗಳ ನಂತರ ಹೆಚ್.ಡಿ. ಕುಮಾರಸ್ವಾಮಿ ಅವರು ಶಿವಮೊಗ್ಗ ಗ್ರಾಮಾಂತರ ಹಾಗೂ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...