alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ. ಹೇಳಿಕೆಗೆ ಯಡಿಯೂರಪ್ಪ ಟಾಂಗ್

ಮುಖ್ಯಮಂತ್ರಿಯಾದ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರು, ತಾವು ನರೇಂದ್ರ ಮೋದಿಯವರ ಅಶ್ವಮೇಧ ಯಾಗದ ಕುದುರೆಯನ್ನು ಕಟ್ಟಿ ಹಾಕಿದ್ದೇವೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಕುಮಾರಸ್ವಾಮಿಯವರೇ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಪಕ್ಷ ಎಷ್ಟು ಸ್ಥಾನ ಪಡೆದಿದೆ ಎಂದು ತಿಳಿದಿದೆಯಾ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ 149 ಕ್ಷೇತ್ರಗಳಲ್ಲಿ ನಿಮ್ಮ ಪಕ್ಷದ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದು, ಅಧಿಕಾರದ ಮದದಿಂದ ನೀವು ಮಾತನಾಡುತ್ತಿದ್ದೀರಿ. ಚುನಾವಣೆಯಲ್ಲಿ ಜನ ನಿಮ್ಮನ್ನು ತಿರಸ್ಕರಿಸಿದ್ದಾರೆ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...