alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದ್ದು, ರಾಜಕೀಯ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಈಗ ವೈಯಕ್ತಿಕ ಮಟ್ಟಕ್ಕೂ ತಿರುಗಿದೆ.

ಶಿವಮೊಗ್ಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿ ನಡೆಸಿದ್ದು, ಮುಂದೊಂದು ದಿನ ನಿಮ್ಮ ಮೇಲೂ ‘ಮೀ ಟೂ’ ಆರೋಪ ಕೇಳಿ ಬಂದರೆ ಅಚ್ಚರಿ ಇಲ್ಲವೆಂದು ಹೇಳುವ ಮೂಲಕ ದೊಡ್ಡ ಬಾಂಬ್ ಸಿಡಿಸಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಅವರ ಹೆಸರನ್ನೆತ್ತಿಕೊಂಡು ಕುಮಾರಸ್ವಾಮಿಯವರ ವಿರುದ್ಧ ವೈಯಕ್ತಿಕ ನೆಲೆಯಲ್ಲಿ ವಾಕ್ಪ್ರಹಾರ ನಡೆಸಿದ ಕುಮಾರ್ ಬಂಗಾರಪ್ಪ, ನಿಮ್ಮ ಕುಟುಂಬದ ಬಹುತೇಕ ಸದಸ್ಯರು ಚುನಾವಣಾ ರಾಜಕೀಯದಲ್ಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರನ್ನು ಈ ಚುನಾವಣೆಯಲ್ಲಿ ಪ್ರಚಾರಕ್ಕೆ ಏಕೆ ಬಳಸಿಕೊಳ್ಳುತ್ತಿಲ್ಲ, ಅವರನ್ನು ಹಾಸನದಲ್ಲಿ ಚುನಾವಣೆಗೇಕೆ ನಿಲ್ಲಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕುಮಾರ ಬಂಗಾರಪ್ಪನವರ ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದು, ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳುತ್ತದೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...