alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ .ಎಂ. ನೇತೃತ್ವದಲ್ಲಿ ಸಾಲಮನ್ನಾ ಕುರಿತ ಸಭೆ ಆರಂಭ

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ರೈತರ ಸಾಲಮನ್ನಾ ಕುರಿತ ಚರ್ಚೆ ರಾಜ್ಯದಲ್ಲಿ ನಡೆದಿದ್ದು, ಸಾಲ ಮನ್ನಾಕ್ಕೆ ಆಗ್ರಹಿಸಿ ಬಂದ್ ಕೂಡ ನಡೆದಿದೆ.

ರೈತರ ಸಾಲ ಮನ್ನಾ ಮಾಡಲು ತಮ್ಮ ಸರ್ಕಾರ ಬದ್ಧವಾಗಿರುವುದಾಗಿ ಹಲವು ಸಂದರ್ಭಗಳಲ್ಲಿ ಹೇಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಒಂದು ವೇಳೆ ಅದು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಲು ಸಿದ್ಧ ಎಂದಿದ್ದರು.

ರೈತರ ಸಾಲ ಮನ್ನಾಕ್ಕೆ ಈಗಾಗಲೇ ಪೂರಕ ಸಿದ್ಧತೆಗಳನ್ನು ಕೈಗೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಬೆಂಗಳೂರಿನಲ್ಲಿ ಇಂದು ರಾಜ್ಯದ ಎಲ್ಲ ಜಿಲ್ಲೆಗಳ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸುತ್ತಿದ್ದಾರೆ.

ರೈತರು ಹಾಗೂ ವಿವಿಧ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸಾಲ ಮನ್ನಾ ಕುರಿತು ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...