alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಡ್ಯ ರೈತರ ಕ್ಷಮೆ ಯಾಚಿಸಿದ ಕುಮಾರಸ್ವಾಮಿ

kumarswamy-33456ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯಲ್ಲಿ ರೈತರ ಹೋರಾಟ ತೀವ್ರಗೊಂಡಿದ್ದು, ಇಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾವು ಮೊದಲ ದಿನದಿಂದಲೇ ಮಂಡ್ಯ ರೈತರ ಜೊತೆಗೂಡಬೇಕಿತ್ತು. ಆದರೆ ಪೊಲೀಸರ ಸೂಚನೆಯಂತೆ ಇಲ್ಲಿಗೆ ಆಗಮಿಸಿರಲಿಲ್ಲ. ಇದಕ್ಕಾಗಿ ಕ್ಷಮೆ ಕೋರುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ನಲ್ಲಿ ತಾಂತ್ರಿಕವಾಗಿ ವಾದ ಮಂಡಿಸುವಲ್ಲಿ ವಿಫಲವಾಗಿದ್ದೇ ಇಂತಹ ತೀರ್ಪು ಹೊರ ಬೀಳಲು ಕಾರಣವೆಂದು ಆರೋಪಿಸಿದ ಕುಮಾರಸ್ವಾಮಿ, ಜಿಲ್ಲೆಯ ರೈತರು ಬಿತ್ತಿರುವ ಬೆಳೆಯ ಲಾಭ ಸಂಪೂರ್ಣವಾಗಿ ಸಿಗಬೇಕಿದೆ. ಇಲ್ಲವಾದಲ್ಲಿ ಸರ್ಕಾರ, ಮುಂದಿನ ದಿನಗಳಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...