alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಸಾಲ ಮನ್ನಾ ಮಾಡಲು 15 ದಿನಗಳ ಕಾಲಾವಕಾಶ ಕೋರಿದ ಸಿಎಂ

ರೈತರ ಸಾಲ ಮನ್ನಾ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ್ದು, ಸಾಲಮನ್ನಾದ ಕುರಿತಂತೆ ನಿರ್ಧಾರ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡುವಂತೆ ಕುಮಾರಸ್ವಾಮಿ ಕೋರಿದ್ದಾರೆ.

ಸಾಲ ಮನ್ನಾ ಮಾಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲಾಗುವುದು. ಅವರು ವರದಿ ನೀಡಿದ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸಾಲ ಮನ್ನಾ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾಲ ಮನ್ನಾವಾಗುತ್ತದೋ, ಇಲ್ಲವೋ ಎಂಬ ಬಗ್ಗೆ ರೈತರು ಆತಂಕಪಡುವ ಅಗತ್ಯವಿಲ್ಲ. ಎಲ್ಲ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...