alex Certify
ಕನ್ನಡ ದುನಿಯಾ       Mobile App
       

Kannada Duniya

ಕುಮಟಾದಲ್ಲಿ ತಪ್ಪಿತು ಭಾರೀ ಅನಾಹುತ

tanker

ಕಾರವಾರ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾದ ಗಿಬ್ ಸರ್ಕಲ್ ಸಮೀಪ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಕುಮಟಾ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಪಲ್ಟಿಯಾದ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗಿದ್ದರೆ, ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಟ್ಯಾಂಕರ್ ಅನ್ನು ಸುರಕ್ಷಿತವಾಗಿ ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...