alex Certify
ಕನ್ನಡ ದುನಿಯಾ       Mobile App
       

Kannada Duniya

ನಾಲ್ವರು ಮಕ್ಕಳು ನೀರು ಪಾಲು

ಬೀದರ್: ಈಜಲು ಕೆರೆಗೆ ತೆರಳಿದ್ದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರು ಗ್ರಾಮದ ಬಳಿ ನಡೆದಿದೆ.

ಮೂವರು ಬಾಲಕಿಯರು, ಓರ್ವ ಬಾಲಕ ನೀರು ಪಾಲಾಗಿದ್ದು, ಹುಡುಕಾಟ ನಡೆಸಲಾಗಿದೆ. ಎಳ್ಳು ಅಮಾವಾಸ್ಯೆ ಪ್ರಯುಕ್ತ ಜಮೀನಿಗೆ ತೆರಳಿದ್ದ ಮಕ್ಕಳು, ಊಟ ಮುಗಿಸಿ ಈಜಲು ಸರಜೋಳ ಕೆರೆಗೆ ತೆರಳಿದ್ದಾರೆ.

ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಸ್ಥಳೀಯರು ಹುಡುಕಾಟ ನಡೆಸಿದ್ದಾರೆ.

ಕತ್ತಲಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...