alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾದಿತ ಹೇಳಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕೆ.ಪಿ.ಸಿ.ಸಿ. ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮಹಾರಾಷ್ಟ್ರ ಪರವಾಗಿ ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಬೆಳಗಾವಿ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ಆಗಸ್ಟ್ 27 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ತೀರ್ಪು ನೀಡಲಿದೆ. ಆಗ ನಾನೇ ಮುಂದೆ ನಿಂತು ಮಹಾರಾಷ್ಟ್ರ ಧ್ವಜ ಹಿಡಿದು ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗುವುದಾಗಿ ಹೇಳಿದ್ದಾರೆ.

ಅವರು ಈ ಹೇಳಿಕೆ ನೀಡುತ್ತಿದ್ದಂತೆ ಅಲ್ಲಿದ್ದ ಮರಾಠಿ ಭಾಷಿಕರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ. ಮುಂದುವರೆದು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಜೈ ಮಹಾರಾಷ್ಟ್ರ ಎಂದು ಹೇಳಲು ಯಾರಿಗೂ ಧೈರ್ಯವಿಲ್ಲ, ಆದರೆ, ನನಗೆ ಯಾರ ಭಯವೂ ಇಲ್ಲ ಎಂದು ತಿಳಿಸಿದ್ದಾರೆ.

ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಅವರು, ತಾವು ಹಾಗೆ ಹೇಳಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಗಡಿ ವಿವಾದವಿದೆ ಎಂದಷ್ಟೇ ಹೇಳಿರುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...