alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಹಿ ಸುದ್ದಿ! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

top-laop

ಬೆಂಗಳೂರು: ಬಡ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಉಚಿತವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲು ಮುಂದಾಗಿದೆ.

ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜ್ ಗಳಲ್ಲಿ ಓದುತ್ತಿರುವ 1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜ್, ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಡಿಪ್ಲೊಮಾದಲ್ಲಿ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡಲಾಗುವುದು.

ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಟಿ.ಬಿ. ಜಯಚಂದ್ರ, ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲು ಸುಮಾರು 300 ಕೋಟಿ ರೂ. ಬೇಕಾಗುತ್ತದೆ. ಲ್ಯಾಪ್ ಟಾಪ್ ಪಡೆಯುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ. ಒಳಗೆ ಇರಬೇಕು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...