alex Certify
ಕನ್ನಡ ದುನಿಯಾ       Mobile App
       

Kannada Duniya

ಪದವಿ ವಿದ್ಯಾರ್ಥಿಗಳಿಗೆ ಸಿಗುತ್ತೆ ಉಚಿತ ಲ್ಯಾಪ್ ಟಾಪ್

laptop

ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷದಿಂದಲೇ ಉಚಿತವಾಗಿ ಲ್ಯಾಪ್ ಟಾಪ್ ನೀಡಲಾಗುವುದು.

ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ, ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಮೊದಲ ವರ್ಷದ ಪದವಿ ಓದುತ್ತಿರುವ ಎಸ್.ಸಿ., ಎಸ್.ಟಿ.ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಿದ್ದು, ಮುಂದಿನ ವರ್ಷದಿಂದ ಇತರೆ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...