alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್

ಬೆಂಗಳೂರು: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ಲ್ಯಾಪ್ ಟಾಪ್ ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜ್ ನಲ್ಲಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು, ನವೆಂಬರ್ 15 ರೊಳಗೆ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಸಿಗಲಿದೆ. ಮುಂದಿನ ವರ್ಷದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

1 ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಎಲ್ಲಾ ವಿದ್ಯಾರ್ಥಿನಿಯರಿಗೂ ಉಚಿತವಾಗಿ ಶಿಕ್ಷಣ ನೀಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸಮಿತಿ ವರದಿ ನೀಡಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...