alex Certify
ಕನ್ನಡ ದುನಿಯಾ       Mobile App
       

Kannada Duniya

ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ‘ಭಾಗ್ಯ’(ಯೋಜನೆ)ಗಳನ್ನು ಜನರಿಗೆ ನೀಡಿದೆ.

ಅದೇ ರೀತಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವ ಯೋಜನೆಯನ್ನು ರೂಪಿಸಲಾಗಿದೆ. ಮೊದಲಿಗೆ ಎಸ್.ಸಿ. –ಎಸ್.ಟಿ. ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ ಟಾಪ್ ಗಳನ್ನು ವಿತರಿಸಲು ಸರ್ಕಾರ ಯೋಜಿಸಿತ್ತು.

ನಂತರದಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ತೀರ್ಮಾನಿಸಲಾಗಿದೆ. ಲ್ಯಾಪ್ ಟಾಪ್ ಖರೀದಿಯಲ್ಲಿ ಲೋಪ ನಡೆದಿರುವ ಆರೋಪ ಕೇಳಿ ಬಂದಿತ್ತು. ನಂತರದಲ್ಲಿ ಪರಿಶೀಲಿಸಿದ ಸದನ ಸಮಿತಿ ಲ್ಯಾಪ್ ಟಾಪ್ ಖರೀದಿಗೆ ಒಪ್ಪಿಗೆ ನೀಡಿದ್ದು, ಟೆಂಡರ್ ಆಹ್ವಾನಿಸಲಾಗಿದೆ.

ಮೊದಲ ವರ್ಷದ ಪದವಿ ಓದುತ್ತಿರುವ, ವಾರ್ಷಿಕ ಆದಾಯ 2.5 ಲಕ್ಷ ರೂ. ಒಳಗಿರುವ, ಸರ್ಕಾರಿ ಪದವಿ ಕಾಲೇಜುಗಳಲ್ಲಿನ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್ ಟಾಪ್ ನೀಡಲು ಮುಂದಾಗಿದ್ದು, ಇದಕ್ಕೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...