alex Certify
ಕನ್ನಡ ದುನಿಯಾ       Mobile App
       

Kannada Duniya

ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾದ ನಟಿ ಲೀಲಾವತಿ

hqdefault

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ತಮ್ಮ ಪುತ್ರ ವಿನೋದ್ ರಾಜ್ ಜೊತೆ ನೆಲೆಸಿರುವ ಲೀಲಾವತಿ ಅವರು, ಕಳೆದೆರಡು ದಿನಗಳ ಹಿಂದೆ ಆಯತಪ್ಪಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಈ ನೋವು ನಿವಾರಣೆಗಾಗಿ ಮನೆಯಲ್ಲೇ ಲೀಲಾವತಿಯವರು ಮಾತ್ರೆಯನ್ನು ಸೇವಿಸುತ್ತಿದ್ದರು. ಆದರೆ ಈ ಮಾತ್ರೆ ಸೇವನೆಯಿಂದ ಇಂದು ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ತಕ್ಷಣ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು.

ಈಗಾಗಲೇ ಐಸಿಯು ನಲ್ಲಿ ಲೀಲಾವತಿಯವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...