alex Certify
ಕನ್ನಡ ದುನಿಯಾ       Mobile App
       

Kannada Duniya

ಆಹಾರ ಅರಸಿ ನಾಡಿಗೆ ಬಂದು ಬಂಧಿಯಾದ ಚಿರತೆ

ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ರೇಷ್ಮೆ ಸಾಕಾಣಿಕೆ ಕೊಠಡಿಯಲ್ಲಿ ಬಂಧಿಯಾದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬೇಲಿ ಕೊತ್ತನೂರು ಗ್ರಾಮದಲ್ಲಿ ನಡೆದಿದೆ.

ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಬೇಲಿ ಕೊತ್ತನೂರು ಗ್ರಾಮದ ಜಗದೀಶ್ ಎಂಬವರಿಗೆ ಸೇರಿದ ರೇಷ್ಮೆ ಸಾಕಾಣಿಕೆ ಕೊಠಡಿಗೆ ಈ ಚಿರತೆ ಪ್ರವೇಶಿಸಿದೆ. ಈ ಸಂದರ್ಭದಲ್ಲಿ ಅಲ್ಲಿದ್ದ ತಮ್ಮಯ್ಯ ಎಂಬವರ ಮೇಲೆ ಚಿರತೆ ದಾಳಿ ಮಾಡಿದ್ದು, ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ತಮ್ಮಯ್ಯನವರ ಚೀರಾಟ ಕೇಳಿ ಮನೆಯಿಂದ ಹೊರಬಂದ ಜಗದೀಶ್, ಅವರನ್ನು ಕೊಠಡಿಯಿಂದ ಹೊರ ಕರೆತರಲು ಯಶಸ್ವಿಯಾದರಲ್ಲದೆ ಚಿರತೆಯಿದ್ದ ಕೊಠಡಿಗೆ ಹೊರಗಿನಿಂದ ಚಿಲಕ ಹಾಕಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ತಮ್ಮಯ್ಯರನ್ನು ಕನಕಪುರದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕನಕಪುರ ಗ್ರಾಮಾಂತರ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದು ಕಾಡಿಗಟ್ಟಲು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...