alex Certify
ಕನ್ನಡ ದುನಿಯಾ       Mobile App
       

Kannada Duniya

ವಿಬ್ ಗಯಾರ್ ಶಾಲೆಗೇ ಬಂತು ಚಿರತೆ !

1811-2-2-leapord-1

ಕಾಡು ಬರಿದಾದಂತೆ ಕಾಡುಪ್ರಾಣಿಗಳು ನಾಡಿಗೆ ಬರುವುದು ಮಾಮೂಲಿಯಾಗಿಬಿಟ್ಟಿದೆ. ಇದಕ್ಕೆ ನಿದರ್ಶನವೆಂಬಂತೆ ವರ್ತೂರು ಬಳಿ ಇರುವ ವಿಬ್ ಗಯಾರ್ ಶಾಲೆಗೆ ಚಿರತೆಯೊಂದು ನುಗ್ಗಿದ್ದು ಆತಂಕಕ್ಕೆ ಕಾರಣವಾಗಿದೆ.

ಹೌದು. ಇಲ್ಲಿನ ವಿಬ್ ಗಯಾರ್ ಶಾಲೆಗೆ ದಾರಿ ತಪ್ಪಿ ಬಂದ ಚಿರತೆಯೊಂದು ನುಗ್ಗಿದ್ದು, ಅದೃಷ್ಟವಶಾತ್ ಇಂದು ಭಾನುವಾರವಾದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಶನಿವಾರ ತಡರಾತ್ರಿ ಶಾಲೆಯ ಆವರಣದೊಳಗೆ ಚಿರತೆ ಆಗಮಿಸುತ್ತಿರುವುದನ್ನು ಭದ್ರತಾ ಸಿಬ್ಬಂದಿ ಸಿಸಿ ಟಿವಿಯಲ್ಲಿ ಗಮನಿಸಿದ್ದು ತಕ್ಷಣ ವರ್ತೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಚಿರತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ನೂರಾರು ಜನರು ಚಿರತೆ ನೋಡಲು ಶಾಲಾ ಆವರಣಕ್ಕೆ ಆಗಮಿಸಿದ್ದು ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related News

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...