alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತ ಧರ್ಮ: ಬಿ.ಎಸ್.ವೈ. ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು: ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ(ಬಸವತತ್ವವನ್ನು ನಂಬುವವರಿಗೆ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕೆಂದು, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಈ ಕುರಿತು ಚರ್ಚಿಸಲು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಬೆಂಗಳೂರು ಡಾಲರ್ಸ್ ಕಾಲೋನಿಯ ಬಿ.ಎಸ್.ವೈ. ನಿವಾಸದಲ್ಲಿ ನಡೆದಿರುವ ಸಭೆಯಲ್ಲಿ ರಾಷ್ಟ್ರೀಯ ಬಿ.ಜೆ.ಪಿ. ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಮೊದಲಾದವರು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಲಿಂಗಾಯತ ಧರ್ಮ ವಿಚಾರವಾಗಿ ಪಕ್ಷ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು, ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರವನ್ನು ರೂಪಿಸುವ ಕುರಿತು ಸಮಾಲೋಚನೆ ನಡೆಯಲಿದೆ. ಲಿಂಗಾಯತ ಧರ್ಮದ ವಿಚಾರವಾಗಿ ತಟಸ್ಥ ನಿಲುವು ಹೊಂದಿದ್ದ ಬಿ.ಜೆ.ಪಿ., ಈಗ ಕೇಂದ್ರಕ್ಕೆ ಶಿಪಾರಸು ಮಾಡಿರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಈ ವಿಚಾರ ಬೀರಬಹುದಾದ ಪರಿಣಾಮಗಳ ಕುರಿತು ಚರ್ಚೆ ನಡೆಸಲಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಬಿ.ಜೆ.ಪಿ. ಮೊದಲಿನಿಂದಲೂ ಅಖಿಲ ಭಾರತ ವೀರಶೈವ ಮಹಾಸಭಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವ ನಿಲುವು ಹೊಂದಿದೆ. ಈಗ ರಾಜ್ಯ ಸರ್ಕಾರದ ಈ ಶಿಫಾರಸಿನ ಕುರಿತು ಮಹಾಸಭಾ ತುರ್ತಾಗಿ ಸಭೆ ಸೇರಿ ಸಾಧಕ –ಬಾಧಕಗಳ ಚರ್ಚೆ ನಡೆಸಿ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...