alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ, ರಾಜ್ಯ ಸರ್ಕಾರದ ಅಧಿಸೂಚನೆ

ಬೆಂಗಳೂರು: ಬಸವತತ್ವ ಒಪ್ಪುವ ಲಿಂಗಾಯತ ಮತ್ತು ವೀರಶೈವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಲಿಂಗಾಯತ ಮತ್ತು ವೀರಶೈವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಒಳಗೊಂಡ ಮೀಸಲು ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಹಕ್ಕು ಆಸ್ತಿಗಳಿಗೆ ಧಕ್ಕೆ ಬಾರದಂತೆ ಸೌಲಭ್ಯ ಕಲ್ಪಿಸಲಾಗುವುದು. ಕೇಂದ್ರ ಸರ್ಕಾರ ಮಾನ್ಯತೆ ನೀಡಿದ ದಿನದಿಂದ ಈ ಅಧಿಸೂಚನೆಗೆ ಮಾನ್ಯತೆ ಬರಲಿದೆ.

ಲಿಂಗಾಯತ ಧರ್ಮದ ವಿಚಾರ ರಾಜ್ಯದಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗಿದ್ದು, ಪರ –ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ(ಬಸವತತ್ವ ಅನುಸರಿಸುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈಗ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...