alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತ ಧರ್ಮ: ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಪರ, ವಿರೋಧ ಚರ್ಚೆಗಳು ನಡೆದಿವೆ. ಲಿಂಗಾಯತ ಧರ್ಮದ ಬಗ್ಗೆ ವರದಿ ನೀಡಲು ಸರ್ಕಾರದಿಂದ ತಜ್ಞರ ಸಮಿತಿಯನ್ನು ರಚಿಸಲಾಗಿದೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದಿಂದ ತಜ್ಞರ ಸಮಿತಿಯನ್ನು ರಚಿಸಿರುವ ಕುರಿತಾಗಿ 2 ಪಿ.ಐ.ಎಲ್. ಸಲ್ಲಿಕೆಯಾಗಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿದೆ.

ಅಲ್ಪಸಂಖ್ಯಾತ ಆಯೋಗಕ್ಕೆ ತಜ್ಞರ ಸಮಿತಿ ನೀಡುವ ವರದಿ ಹೈಕೋರ್ಟ್ ನೀಡುವ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದು ಮಧ್ಯಂತರ ಆದೇಶ ನೀಡಲಾಗಿದೆ.

ಸರ್ಕಾರ ಕೈಗೊಂಡಿರುವ ಕ್ರಮ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಿದೆ ಎಂದು ಅರ್ಜಿದಾರರು ದೂರಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್, ಮಧ್ಯಂತರ ಆದೇಶ ನೀಡಿ ಸರ್ಕಾರ, ಅಲ್ಪ ಸಂಖ್ಯಾತರ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...