alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬಿಗಿ ಪಟ್ಟು

lingayt

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ರಚನೆ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಠಾಧೀಶರು ಮತ್ತು ಗಣ್ಯರ ಸಭೆ ನಡೆದಿದ್ದು, 5 ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ.

ಬಸವಣ್ಣನವರೇ ಧರ್ಮಗುರುಗಳಾಗಿದ್ದು, ಅವರೇ ಧರ್ಮದ ಸ್ಥಾಪಕರಾಗಿದ್ದಾರೆ. ಅವರ ವಚನಗಳೇ ಧರ್ಮ ಗ್ರಂಥಗಳಾಗಿವೆ.

ಅಖಿಲ ಭಾರತ ವೀರಶೈವ ಮಹಾಸಭಾ ಲಿಂಗಾಯತ ಮಹಾಸಭಾ ಎಂದು ಬದಲಾಗಬೇಕು. ವಿರಕ್ತ ಮಠದ ಸ್ವಾಮೀಜಿಗಳು ಬಸವ ತತ್ವ ಪ್ರಚಾರ ಮಾಡಬೇಕು. ಇಲ್ಲವಾದರೆ ಪೀಠವನ್ನು ತ್ಯಾಗ ಮಾಡಬೇಕು. ಇವೇ ಮೊದಲಾದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತಾಗಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎನ್ನಲಾಗಿದೆ.

ಸಭೆಯಲ್ಲಿ ಮಠಾಧೀಶರು, ಸಚಿವರು, ಸಾಹಿತಿಗಳು, ಗಣ್ಯರು, ಅಧ್ಯಯನಕಾರರು ವಿವಿಧ ಸಲಹೆಗಳನ್ನು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...