alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತ ಧರ್ಮ: ರಾಜ್ಯ ಸರ್ಕಾರದ ವಿರುದ್ಧ ‘ಮಹಾಸಭಾ’ ಖಂಡನಾ ನಿರ್ಣಯ

ಬೆಂಗಳೂರು: ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ(ಬಸವತತ್ವ ಅನುಸರಿಸುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭಾ ಖಂಡಿಸಿದೆ.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2013 ರಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮನವಿ ಮಾಡಿದ್ದು, ಅದನ್ನು ಪುರಸ್ಕರಿಬೇಕೆಂದು ಹೇಳಿದ್ದಾರೆ.

ವೀರಶೈವ ಲಿಂಗಾಯತ ಎರಡೂ ಒಂದೇ ಆಗಿದ್ದು, ಯಾರನ್ನೂ ಪ್ರತ್ಯೇಕ ಮಾಡಬಾರದು. ಬಸವ ತತ್ವವನ್ನು ಒಡೆಯಬಾರದು. ಸರ್ಕಾರ ಮಾಡಿರುವ ಶಿಫಾರಸು ತಪ್ಪು ಎಂದು ಸಭೆಯ ಬಳಿಕ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

2013 ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಯನ್ನೇ ಪುರಸ್ಕರಿಸಬೇಕು. ಈ ನಿಟ್ಟಿನಲ್ಲಿ ಮಹಾಸಭಾ ಮತ್ತೊಮ್ಮೆ ಮನವಿ ಮಾಡಲಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...