alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಘರ್ಷಕ್ಕೆ ಕಾರಣವಾಗಲಿದೆ ಲಿಂಗಾಯತ ಧರ್ಮ ವಿಚಾರ…?

ರಾಜ್ಯದಲ್ಲಿ ಭಾರೀ ಚರ್ಚೆಗೆ ಒಳಗಾಗಿರುವ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವ ವಿಚಾರದ ಕುರಿತಂತೆ, ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕೇಂದ್ರದತ್ತ ಎಲ್ಲರ ಚಿತ್ತ ನೆಟ್ಟಿದೆ.

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ ಕೈಗೊಳುತಿರುವಂತೆಯೇ ವಿಜಯೋತ್ಸವ ಆಚರಿಸಲಾಗಿದೆ. ಇದಕ್ಕೆ ವೀರಶೈವರಿಂದ ವಿರೋಧ ವ್ಯಕ್ತವಾಗಿದೆ. ಕೆಲವು ತಿಂಗಳ ಹಿಂದೆ ಲಿಂಗಾಯತ ಧರ್ಮಕ್ಕಾಗಿ ಹೋರಾಟ ತೀವ್ರಗೊಳ್ಳುತ್ತಿದ್ದಂತೆಯೇ ಅಷ್ಟೇ ಪ್ರಮಾಣದಲ್ಲಿ ವಿರೋಧ ಕೂಡ ವ್ಯಕ್ತವಾಗಿತ್ತು. ಬಸವತತ್ವ ಒಪ್ಪಿದವರು ಲಿಂಗಾಯತ ಧರ್ಮದ ವ್ಯಾಪ್ತಿಗೆ ಬರುತ್ತಾರೆ ಎಂದು ಹೇಳಲಾಗಿದ್ದು, ವೀರಶೈವ ಮತ್ತು ಲಿಂಗಾಯತರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಳೆದು ತೂಗಿಯೇ ನಿರ್ಧಾರ ಕೈಗೊಂಡಿದ್ದಾರೆ. ಸಂಪುಟದ ಕೆಲವು ಸಚಿವರು, ವೀರಶೈವ ಮಠಾಧೀಶರು ಲಿಂಗಾಯತ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿದ್ದರಾದರೂ, ಸರ್ಕಾರ ತನ್ನ ನಿಲುವನ್ನು ಪ್ರಕಟಿಸಿದೆ.

ಲಿಂಗಾಯತ ಧರ್ಮದ ವಿಚಾರವೀಗ ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೂ ಕಾರಣವಾಗಿದೆ. ಸಿದ್ಧರಾಮಯ್ಯನವರ ನಡೆ ಕುರಿತಾಗಿ ಪರ, ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಈಗಾಗಲೇ ಕಲಬುರಗಿಯಲ್ಲಿ ಘರ್ಷಣೆ ನಡೆದಿದೆ. ಅದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಚೆಂಡು ಕೇಂದ್ರದ ಅಂಗಳ ತಲುಪಲಿದ್ದು, ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...