alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತ ಧರ್ಮ, ರಾಜ್ಯ ಸರ್ಕಾರದ ಜಾಣ ನಡೆ…?

ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ, ಇಲ್ಲವೇ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ವರದಿ ನೀಡಿದೆ.

ಅಲ್ಪಸಂಖ್ಯಾತರ ಆಯೋಗಕ್ಕೆ ತಜ್ಞರ ಸಮಿತಿ ವರದಿ ನೀಡಿದ್ದು, ಪ್ರತ್ಯೇಕ ಧರ್ಮದ ಬದಲಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಸಲಹೆ ನೀಡಿದೆ. ಅಲ್ಲದೇ, ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ವರದಿಯಲ್ಲಿ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಾಗಿದ್ದು, ಇದು ಹಿಂದೂ ಧರ್ಮಕ್ಕಿಂತ ವಿಭಿನ್ನವಾದ ಸಂಸ್ಕೃತಿ, ಆಚರಣೆಗಳನ್ನು ಹೊಂದಿದೆ. ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬಹುದಾದ ಅರ್ಹತೆಗಳು ಇದ್ದು, ಸ್ವತಂತ್ರ ಧರ್ಮಕ್ಕೆ ಶಿಫಾರಸ್ಸು ಮಾಡಲು ತಿಳಿಸಲಾಗಿದೆ ಎನ್ನಲಾಗಿದೆ.

ಲಿಂಗಾಯತ ಧರ್ಮ ವಿಚಾರವಾಗಿ ತಜ್ಞರ ಸಮಿತಿ ನೀಡಿರುವ ಈ ವರದಿಯನ್ನು ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ರಾಜ್ಯ ಸರ್ಕಾರ, ಕೇಂದ್ರಕ್ಕೆ ಸಲ್ಲಿಸುವ ಸಾಧ್ಯತೆ ಇದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ವೀರಶೈವ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ. ಪ್ರತ್ಯೇಕ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಬೇಕೆಂದು ಲಿಂಗಾಯತ ಧರ್ಮದ ಪರ ಹೋರಾಟಗಾರರು ಆಗ್ರಹಿಸಿದ್ದಾರೆ. ಸರ್ಕಾರ ನೇಮಿಸಿದ್ದ ತಜ್ಞರ ಸಮಿತಿ ವರದಿ ನೀಡಿದ್ದು, ಸರ್ಕಾರ ಕೈಗೊಳ್ಳಲಿರುವ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...