alex Certify
ಕನ್ನಡ ದುನಿಯಾ       Mobile App
       

Kannada Duniya

‘ಲಿಂಗಾಯತ ಧರ್ಮ ಕುರಿತು ಪಕ್ಷದಲ್ಲಿ ಚರ್ಚೆಯಾಗಿಲ್ಲ’

dr-g-p-kpcc

ಬೆಂಗಳೂರು: ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಿಲ್ಲ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಪ್ರತ್ಯೇಕ ಧರ್ಮದ ವಿಚಾರ ಸೂಕ್ಷ್ಮವಾದ ವಿಚಾರವಾಗಿದೆ. ಸಚಿವರು ಪ್ರತ್ಯೇಕ ಧರ್ಮದ ವಿಚಾರವಾಗಿ ನೀಡಿರುವ ಹೇಳಿಕೆ ಅವರ ಸ್ವಂತ ಅಭಿಪ್ರಾಯವಾಗಿದೆ ಎಂದು ಹೇಳಿದ್ದಾರೆ.

ಹಿಂದೂ ಧರ್ಮವನ್ನು ಬಿಟ್ಟು ಪ್ರತ್ಯೇಕ ಧರ್ಮವನ್ನು ಸ್ಥಾಪಿಸುವುದು ಸೂಕ್ಷ್ಮವಾದ ವಿಚಾರವಾಗಿದೆ. ಕೆಲವು ಮಠಾಧೀಶರು ಬೇಕು ಎಂದರೆ, ಮತ್ತೆ ಕೆಲವರು ಬೇಡವೆನ್ನುತ್ತಾರೆ. ಅಗತ್ಯವಾದರೆ ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರದ ಸಚಿವರು ಪ್ರವಾಸ ಕೈಗೊಂಡು ಪ್ರತ್ಯೇಕ ಧರ್ಮದ ವಿಚಾರವಾಗಿ ಮಠಾಧೀಶರನ್ನು ಒಂದುಗೂಡಿಸಲು ಪ್ರಯತ್ನ ನಡೆಸಿರುವ ಕುರಿತು ತಮಗೆ ಮಾಹಿತಿ ಇಲ್ಲ. ಪಕ್ಷದ ವೇದಿಕೆಯಲ್ಲಿ ಪ್ರತ್ಯೇಕ ಧರ್ಮದ ವಿಚಾರವಾಗಿ ಯಾವ ಚರ್ಚೆಯೂ ನಡೆದಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...