alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್..!?

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಬಜೆಟ್ ನಲ್ಲಿ ಎಲ್ಲಾ ವರ್ಗದವರ ಓಲೈಕೆಗೆ ಕಾರ್ಯಕ್ರಮ ರೂಪಿಸಿದ್ದಾರೆ.

ರಾಜ್ಯದ ಎಲ್ಲಾ ಜನರಿಗೆ ಆರೋಗ್ಯವನ್ನು ಒದಗಿಸುವ ಸರ್ವರಿಗೂ ಆರೋಗ್ಯ ಭಾಗ್ಯ ಯೋಜನೆಯನ್ನು ಸಿ.ಎಂ. ಪ್ರಕಟಿಸಿದ್ದು, ಬಜೆಟ್ ನಲ್ಲಿ ಇದಕ್ಕಾಗಿ 1200 ಕೋಟಿ ರೂ. ಮೀಸಲಿಡುವ ಸಾಧ್ಯತೆ ಇದೆ.

ಇನ್ನು ಅಬಕಾರಿ ತೆರಿಗೆ ಹೆಚ್ಚಿಸುವ ಸಾಧ್ಯತೆ ಇದೆ. ಜಿ.ಎಸ್.ಟಿ. ಬಳಿಕ ತೆರಿಗೆ ನೆಲೆ ವಿಸ್ತರಿಸುವ ಅವಕಾಶ ತಗ್ಗಿರುವುದರಿಂದ ಮದ್ಯದ ಮೇಲಿನ ತೆರಿಗೆಯನ್ನು ಶೇ. 10 ರಿಂದ ಶೇ. 20 ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ.

ಪ್ರಸಕ್ತ ಸಾಲಿನಲ್ಲಿ 18,050 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹ ಗುರಿ ಇದ್ದು, ಅದಕ್ಕೆ 3000 ಕೋಟಿ ರೂ. ಹೆಚ್ಚುವರಿ ಸೇರ್ಪಡೆ ಮಾಡುವ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ತೆರಿಗೆ ಜಾಸ್ತಿಯಾದಲ್ಲಿ ಬಿಯರ್, ಮದ್ಯದ ಬೆಲೆ ಹೆಚ್ಚಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...