alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಥಳೀಯ ಸಂಸ್ಥೆ ಚುನಾವಣೆಗೆ ಅಂತಿಮ ಸಿದ್ದತೆ

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ಅಂತಿಮ ಸಿದ್ದತೆಯನ್ನು ಜಿಲ್ಲಾಡಳಿತ ಕೈಗೊಂಡಿದ್ದು ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತದಾನ ಕೇಂದ್ರಕ್ಕೆ ತೆರಳಿದ್ದಾರೆ.

ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮಾಸ್ಟರಿಂಗ್ ಹಾಗೂ ಡಿಮಾಸ್ಟರಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಶಾಂತಿಯುತ ಹಾಗೂ ನಿಷ್ಪಕ್ಷಪಾತ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಂಡಿದೆ.

ಚುನಾವಣೆಗೆ ನೇಮಕಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಚುನಾವಣಾ ಮತ ಯಂತ್ರ ಮತ್ತಿತರ ಪರಿಕರಗಳೊಂದಿಗೆ ಚುನಾವಣಾಧಿಕಾರಿಗಳು ನಿಯೋಜಿಸಿರುವ ಮತಗಟ್ಟೆ ಕೇಂದ್ರಗಳಿಗೆ ತೆರಳಿದರು.

ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಲು 1886 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ, ನಗರ ಸ್ಥಳೀಯ ಸಂಸ್ಥೆಗಳ ಮತದಾನಕ್ಕೆ ಇವಿಎಂ ಯಂತ್ರ ಬಳಸುತ್ತಿದೆ.

ಪಾಲಿಕೆ ವ್ಯಾಪ್ತಿಯ 35 ವಾರ್ಡ್ ಗಳಿಂದ ಒಟ್ಟು 303 ಮತಗಟ್ಟೆ ಸ್ಥಾಪಿಸಲಾಗಿದ್ದು, ತಲಾ 303 ಬ್ಯಾಲೆಟ್ ಹಾಗೂ ಕಂಟ್ರೋಲ್ ಯುನಿಟ್ಗಳೊಂದಿಗೆ ಹೆಚ್ಚುವರಿ ಮತಯಂತ್ರಗಳನ್ನು ಸಿದ್ದಪಡಿಸಿಟ್ಟುಕೊಳ್ಳಲಾಗಿದೆ.

ಚುನಾವಣೆಯಲ್ಲಿ 135524 ಪುರುಷರು, 138673 ಮಹಿಳೆಯರು ಹಾಗೂ 21 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 274218 ಮತದಾರರು ಹಕ್ಕು ಚಲಾಯಿಸುವ ಅಧಿಕಾರ ಹೊಂದಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮತದಾನದಂದು ನಗರಪಾಲಿಕೆ ವ್ಯಾಪ್ತಿಯ ವಾಣಿಜ್ಯ ಸಂಸ್ಥೆ, ಕಾರ್ಖಾನೆ ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿ ಕಾರ್ಮಿಕ ಇಲಾಖೆ ಆಯುಕ್ತರು ಈಗಾಗಲೇ ಆದೇಶ ಹೊರಡಿಸಿದ್ದಾರೆ. ನಾಳೆ ಪಾಲಿಕೆ ವ್ಯಾಪ್ತಿಯ ಎಲ್ಲ ಶಾಲಾ-ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...