alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ನಾಳೆ: ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಶುಕ್ರವಾರದಂದು ರಾಜ್ಯದ 4 ಮಹಾನಗರಪಾಲಿಕೆ, 29 ನಗರಸಭೆ, 53 ಪುರಸಭೆ ಹಾಗೂ 20 ಪಟ್ಟಣ ಪಂಚಾಯಿತಿಗಳಿಗೆ ಮತದಾನ ನಡೆದಿದ್ದು, ನಾಳೆ ಮತ ಎಣಿಕೆ ಕಾರ್ಯ ನಡೆಯಲಿದೆ.

ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳು ಮಹತ್ವ ಪಡೆದಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದರು ಇದು ಎಷ್ಟರ ಮಟ್ಟಿಗೆ ಫಲಪ್ರದವಾಗಿದೆ ಎಂಬುದು ನಾಳೆ ಬಹಿರಂಗವಾಗಲಿದೆ.

ಗೆಲುವಿಗಾಗಿ ಭರ್ಜರಿ ಪ್ರಚಾರ ನಡೆಸಿದ್ದ ಅಭ್ಯರ್ಥಿಗಳು ಮತ ಎಣಿಕೆ ದಿನ ಹತ್ತಿರವಾಗುತ್ತಿದ್ದಂತೆ ಫಲಿತಾಂಶ ಏನಾಗುವುದೋ ಎಂಬ ಆತಂಕದಲ್ಲಿದ್ದಾರೆ. ಇನ್ನು ಕೆಲವರು ತಮ್ಮ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕೂಡ ಕಟ್ಟಿದ್ದಾರೆ. ಒಟ್ಟಿನಲ್ಲಿ ನಾಳೆ ಹೊರಬೀಳುವ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...