alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತ ಎಣಿಕೆ ಆರಂಭ; ಗೆಲುವಿನ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷಗಳು

2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎನಿಸಿರುವ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ತೀವ್ರ ಪೈಪೋಟಿ ನಡೆದಿದೆ.

ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು 102 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಮತಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರಕ್ಕೆ ಈ ಚುನಾವಣಾ ಫಲಿತಾಂಶ ಅಗ್ನಿ ಪರೀಕ್ಷೆಯಾಗಿದ್ದರೆ, ಇನ್ನು ಅಧಿಕಾರದ ಕನಸು ಕಾಣುತ್ತಿರೋ ಬಿಜೆಪಿಗೆ ಕೂಡ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಮಹತ್ವದ್ದಾಗಿದೆ. ಒಟ್ಟಾರೆ ಸ್ಥಳೀಯ ಸಂಸ್ಥೆಗಳ ಗದ್ದುಗೆ ಯಾರಿಗೆ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ 21 ಜಿಲ್ಲೆಗಳ 3 ಮಹಾನಗರ ಪಾಲಿಕೆ, 29 ನಗರಸಭೆಗಳು, 53 ಪುರಸಭೆಗಳು, 20 ಪಟ್ಟಣ ಪಂಚಾಯ್ತಿಗಳಿಂದ ಒಟ್ಟಾರೆ 9121 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ರಾಜ್ಯಾದ್ಯಂತ ಎಲ್ಲ ಕೇಂದ್ರಗಳಲ್ಲೂ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇದಕ್ಕೂ ಮೊದಲು ಅಂಚೆಮತಗಳ ಎಣಿಕೆಯನ್ನು ಪೂರ್ಣಗೊಳಿಸಲಾಗಿದೆ. ಜೆಡಿಎಸ್‌‌ ಪ್ರಾಬಲ್ಯದ ಹಾಸನ, ಮಂಡ್ಯದಲ್ಲಿ ನಿರೀಕ್ಷೆಯಂತೆ ಮುನ್ನಡೆ ಸಾಧಿಸಿದೆ. ಕೆಲ ಮತ ಎಣಿಕೆ ಕೇಂದ್ರಗಳಲ್ಲಿ ಗೊಂದಲ ಕಂಡು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...