alex Certify
ಕನ್ನಡ ದುನಿಯಾ       Mobile App
       

Kannada Duniya

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ಆರಂಭ

ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ಆರಂಭವಾಗಿದೆ. ಕಾಂಗ್ರೆಸ್, ಜೆಡಿಎಸ್​ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ.

ಭೀಕರ ಮಳೆ, ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೊಡಗು ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿ ಚುನಾವಣೆ ಮುಂದೂಡಲಾಗಿದ್ದು, ಉಳಿದಂತೆ ರಾಜ್ಯದ ಮೂರು ಮಹಾನಗರ ಪಾಲಿಕೆಗಳಾದ ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಸೇರಿ 102 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯುತ್ತಿದೆ. 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ರಾಜ್ಯದ ಒಟ್ಟು 2574 ವಾರ್ಡ್​ಗಳಿಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿ ವಿವಿಧ ಪಕ್ಷಗಳು ಹಾಗೂ ಪಕ್ಷೇತರರು ಸೇರಿದಂತೆ 9121 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಮತದಾರರು ಅವರ ಭವಿಷ್ಯ ನಿರ್ಧರಿಸಲಿದ್ದಾರೆ. ಕೆಲವು ನಗರಸಭೆಯ 12 ವಾರ್ಡ್​ಗಳಿಗೆ ಹಾಗೂ ಪುರಸಭೆಯ 17 ವಾರ್ಡ್​ಗಳಲ್ಲಿ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡಲಾಗಿದ್ದು, ಸೆಪ್ಟೆಂಬರ್ 3ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...