alex Certify
ಕನ್ನಡ ದುನಿಯಾ       Mobile App
       

Kannada Duniya

ಪರಿಚಿತನೊಂದಿಗೆ ಲಾಡ್ಜ್ ಗೆ ಹೋದ ಮಹಿಳೆ: ಆಗಿದ್ದೇನು…?

ಬೆಂಗಳೂರು: ಕಾಮುಕನೊಬ್ಬ ಪರಿಚಯಸ್ಥ ಮಹಿಳೆಯನ್ನು ಲಾಡ್ಜ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಕಾಟನ್ ಪೇಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು ನಿವಾಸಿಯಾಗಿರುವ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಕೆಲವು ತಿಂಗಳ ಹಿಂದೆ ರೈಲಿನಲ್ಲಿ ಹಾವೇರಿಗೆ ಹೋಗುವಾಗ ಮರಿಕುಮಾರ್ ಎಂಬಾತ ಪರಿಚಿತನಾಗಿದ್ದಾನೆ. ನಂತರದಲ್ಲಿ ಇಬ್ಬರ ನಡುವೆ ಫೋನ್ ನಲ್ಲಿ ಮಾತುಕತೆ ನಡೆದಿದೆ.

ಅಕ್ಟೋಬರ್ 4 ರಂದು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣಕ್ಕೆ ಮಹಿಳೆಯನ್ನು ಕರೆಸಿಕೊಂಡ ಮರಿಕುಮಾರ್, ಏನೋ ಹೇಳಬೇಕಿದೆ ಎಂದು ಕಾಟನ್ ಪೇಟೆಯ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ನಂತರದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಮರಿಕುಮಾರ್ ಹಾವೇರಿಗೆ ಮಹಿಳೆಯನ್ನು ಕರೆದುಕೊಂಡು ಹೋಗಿ ಮನೆಯಲ್ಲಿಟ್ಟುಕೊಂಡಿದ್ದು, ಅಲ್ಲಿ ಆಕೆಯ ಮೇಲೆ ಮರಿಕುಮಾರ್ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಮಹಿಳೆ ಅಕ್ಟೋಬರ್ 30 ರಂದು ಹಾವೇರಿ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಂತರ ಪ್ರಕರಣವನ್ನು ಕಾಟನ್ ಪೇಟೆ ಪೊಲೀಸರಿಗೆ ವರ್ಗಾಯಿಸಲಾಗಿದ್ದು, ತನಿಖೆ ನಡೆಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...