alex Certify
ಕನ್ನಡ ದುನಿಯಾ       Mobile App
       

Kannada Duniya

ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಪೊಲೀಸರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರಿಗೆ ಬುಧವಾರ ಮಧ್ಯಾಹ್ನ ಲೋಕಾಯುಕ್ತ ಕಛೇರಿಯಲ್ಲೇ ಚಾಕುವಿನಿಂದ ಇರಿದಿದ್ದ ಆರೋಪಿ ತೇಜರಾಜ್ ಶರ್ಮಾನನ್ನು ಪೊಲೀಸರು ಇಂದು 8 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಹೆಚ್ಚಿನ ವಿಚಾರಣೆಗಾಗಿ ತೇಜರಾಜ್ ಶರ್ಮಾನನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡುವ ಸಾಧ್ಯತೆಯಿದ್ದು, ಸದ್ಯ ಆರೋಪಿ ಅಶೋಕ ನಗರ ಠಾಣೆ ಪೊಲೀಸರ ವಶದಲ್ಲಿದ್ದಾನೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ. ತೀವ್ರ ನಿಗಾ ಘಟಕದಲ್ಲಿಯೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೂರ್ನಾಲ್ಕು ದಿನಗಳ ಬಳಿಕ ವಾರ್ಡ್ ಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.

ಲೋಕಾಯುಕ್ತ ಕಛೇರಿಯಲ್ಲಿನ ಭದ್ರತಾ ಲೋಪವೇ ಇಂತದೊಂದು ಘಟನೆಗೆ ಕಾರಣವೆನ್ನಲಾಗಿದ್ದು, ಕಛೇರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಹಲವು ಬಾರಿ ಪತ್ರ ಬರೆದಿದ್ದರೂ ಇದಕ್ಕೆ ಸ್ಪಂದನೆ ಸಿಕ್ಕಿರಲಿಲ್ಲವೆಂಬ ಆಘಾತಕಾರಿ ಅಂಶವೂ ಬೆಳಕಿಗೆ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...