alex Certify
ಕನ್ನಡ ದುನಿಯಾ       Mobile App
       

Kannada Duniya

ಚೇತರಿಕೆಯತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ

ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರಿಗೆ ಮಲ್ಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆಂದು ಹೇಳಲಾಗಿದೆ.

ಇಂದು ಮಧ್ಯಾಹ್ನ ಸಂದರ್ಶಕನ ಸೋಗಿನಲ್ಲಿ ಬಂದ ತೇಜಸ್ ಶರ್ಮಾ ಎಂಬಾತ ವಿಶ್ವನಾಥ ಶೆಟ್ಟಿಯವರಿಗೆ ಐದಾರು ಬಾರಿ ಚಾಕುವಿನಿಂದ ಇರಿದಿದ್ದು, ಅವರನ್ನು ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಲ್ಯ ಆಸ್ಪತ್ರೆಯ ವೈದ್ಯ ಡಾ. ಆನಂದ್ ನೇತೃತ್ವದ ತಂಡ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಇದಕ್ಕೆ ವಿಶ್ವನಾಥ ಶೆಟ್ಟಿಯವರು ಸೂಕ್ತವಾಗಿ ಸ್ಪಂದಿಸಿದ್ದಾರೆ. ಇದೀಗ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಪರಿಶೀಲಿಸಲಾಗುತ್ತಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...