alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿ

ಆ. 26 ರಂದು ನಡೆಯಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆ ಬಳಿಕ ಬಿಜೆಪಿ ನಾಯಕರು ಮುಂಬರುವ ಲೋಕಸಭಾ ಚುನಾವಣೆ ಗೆಲುವಿಗಾಗಿ ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಿದ್ಧತೆ ನಡೆಸಲು ಮುಂದಾಗಿದ್ದಾರೆ.

ಸೆಪ್ಟೆಂಬರ್ ನಲ್ಲಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆಗಳು ಆರಂಭವಾಗಲಿವೆ. ಆ. 31 ರಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವ ಕುರಿತು ರೂಪುರೇಷೆ ಸಿದ್ಧಪಡಿಸಲಾಗುತ್ತದೆ.

ಇನ್ನು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಈ ಎಲ್ಲಾ ಪ್ರತಿಭಟನೆಗಳು ನಡೆಯಲಿದ್ದು, ಈ ಹೋರಾಟಕ್ಕೆ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆ ಬಳಿಕ ಚಾಲನೆ ನೀಡಲು ಬಿಜೆಪಿ ಮುಂದಾಗಿದೆ. ಸೆಪ್ಟೆಂಬರ್ 8 ಹಾಗೂ 9ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ಈ ಹೋರಾಟಗಳ ಕುರಿತ ಚರ್ಚೆ ನಡೆಯುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...