alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಗೆ ಬಹುಮತ ಬಾರದಿರಲು ಇದೇ ಕಾರಣ…!

ಕರ್ನಾಟಕದಲ್ಲಿ ಚುನಾವಣೆ ಮುಗಿದು, ಫಲಿತಾಂಶವೂ ಬಂದು, ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ 104 ಸ್ಥಾನ ಗಳಿಸಿದ್ರೂ ಬಹುಮತ ಸಿಗದ ಹಿನ್ನೆಲೆಯಲ್ಲಿ ಬಿ.ಎಸ್.ವೈ. 15 ದಿನಗಳೊಳಗಾಗಿ ಬಹುಮತ ಸಾಬೀತುಪಡಿಸಬೇಕಿದೆ.

ಬಿಜೆಪಿಗೆ ಇಂತಹ ಪರಿಸ್ಥಿತಿ ಬಂದೊದಗಿದ್ದು, ದಶಕದಲ್ಲಿ ಇದು ಎರಡನೆಯ ಬಾರಿ. 2008ರಲ್ಲೂ ಸರ್ಕಾರ ರಚನೆಯ ಸನಿಹದಲ್ಲಿದ್ದ ಬಿಜೆಪಿಗೆ ಕೇವಲ 3 ಸ್ಥಾನಗಳು ಕಡಿಮೆಯಾಗಿದ್ದವು. ಈ ಬಾರಿ 104 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ 8 ಸ್ಥಾನಗಳ ಕೊರತೆ ಎದುರಾಗಿದೆ.

ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ ಸುಮಾರು 12 ಸ್ಥಾನಗಳನ್ನು ಬಿಜೆಪಿ ಅಭ್ಯರ್ಥಿಗಳು, ಸ್ವಲ್ಪ ಅಂತರದಲ್ಲಿ ಕಳೆದುಕೊಂಡಿದ್ದಾರೆ. ಉದಾಹರಣೆಗೆ ಮಸ್ಕಿಯಲ್ಲಿ ಕಾಂಗ್ರೆಸ್ ನ ಪ್ರತಾಪ್ ಗೌಡ ಬಿಜೆಪಿ ಅಭ್ಯರ್ಥಿ ಎದುರು ಕೇವಲ 213 ಮತಗಳ ಅಂತರದಿಂದ ಗೆದ್ದಿದ್ದಾರೆ. ಬಾದಾಮಿಯಲ್ಲಿ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ 1696 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಗದಗದಲ್ಲಿ ಕಾಂಗ್ರೆಸ್ ನ ಹೆಚ್.ಕೆ. ಪಾಟೀಲ್ ವಿರುದ್ಧ ಬಿಜೆಪಿಯ ಅನಿಲ್ ಮೆಣಸಿನಕಾಯಿ ಕೇವಲ 1868 ಓಟ್ ನಿಂದ ಸೋಲುಂಡಿದ್ದಾರೆ. ಹಿರೇಕೆರೂರಿನಲ್ಲಿ 555 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಉಮೇಶ್ ಬಣಕಾರ್ ವಿರುದ್ಧ ಬಿ.ಸಿ. ಪಾಟೀಲ್ ಗೆದ್ದಿದ್ದಾರೆ.

ಮತ್ತೊಂದೆಡೆ ಇದುವರೆಗೂ ಗೆಲ್ಲುತ್ತಿದ್ದ ತಮ್ಮ ಕ್ಷೇತ್ರಗಳನ್ನು ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಕಳೆದುಕೊಂಡಿದ್ದು, ಪಕ್ಷಕ್ಕೆ ಹೊಡೆತ ನೀಡಿದೆ. ಅದ್ರಲ್ಲಿ ಶೃಂಗೇರಿ, ಯಲ್ಲಾಪುರ, ಅಥಣಿ, ಬಳ್ಳಾರಿ, ಜಮಖಂಡಿ, ಯಮಕನಮರಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿರುವುದು ಪಕ್ಷದ ಬಹುಮತಕ್ಕೆ ಅಡ್ಡಿಯಾಯ್ತು

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...