alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯತಮನ ಮೆಸೇಜ್ ನೋಡಿ ಆತ್ಮಹತ್ಯೆಗೆ ಶರಣಾದ ಯುವತಿ

suicide_066ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೊಂದು ದುರಂತ ಘಟನೆ ನಡೆದಿದೆ. ಪ್ರೀತಿಸುತ್ತಿದ್ದ ಯುವಕ, ನಂತರ ಜಾತಿ ಕಾರಣ ಹೇಳಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಮನನೊಂದ ಯುವತಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾಳೆ.

ಕಾರಟಗಿಯ ಸಾಲುಂಚಿಮರದ ಪ್ರಭಾವತಿ ಸಾವನ್ನಪ್ಪಿದ ಯುವತಿಯಾಗಿದ್ದು, ಈಕೆ ರವಿಕುಮಾರ್ ಎಂಬಾತನನ್ನು ಪ್ರೀತಿಸುತ್ತಿದ್ದಳೆನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ಆಕೆಯನ್ನು ದೂರ ಮಾಡಲು ಯತ್ನಿಸುತ್ತಿದ್ದ ಪ್ರಿಯಕರ ರವಿಕುಮಾರ್, ಜಾತಿ ನೋಡದೇ ಪ್ರೀತಿ ಮಾಡಿಬಿಟ್ಟೆ ಎಂಬ ಮೆಸೇಜ್ ಕಳುಹಿಸಿದ್ದನೆನ್ನಲಾಗಿದೆ.

ಇದರಿಂದ ಮನನೊಂದ ಪ್ರಭಾವತಿ, ಶುಕ್ರವಾರ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತೀವ್ರ ಸುಟ್ಟಗಾಯಗಳಾಗಿದ್ದ ಆಕೆಯನ್ನು ಕಾರಟಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪ್ರಭಾವತಿ ಇಂದು ಸಾವನ್ನಪ್ಪಿದ್ದು, ಈ ಮಧ್ಯೆ ಆಕೆಯ ಪ್ರಿಯಕರ ರವಿಕುಮಾರ್ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಕಾರಟಗಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...