alex Certify
ಕನ್ನಡ ದುನಿಯಾ       Mobile App
       

Kannada Duniya

ಹೆತ್ತವರ ವಿರೋಧ: ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪ್ರೇಮಿಗಳು

poison

ಅಂತರ್ ಧರ್ಮಿಯ ಪ್ರೀತಿಗೆ ಹೆತ್ತವರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಯತ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಪೆನ್ಷನ್ ಮೊಹಲ್ಲಾದಲ್ಲಿ ವಾಸವಿದ್ದ ಹಿಬ್ಸುಲ್ಲಾ (23) ಹಾಗೂ ಸುಷ್ಮ (19) ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು. ಸುಷ್ಮಾ ಹಾಗೂ ಹಿಬ್ಸುಲ್ಲಾ ಶಿವಮೊಗ್ಗದ ಅಶೋಕ ನಗರ ನಿವಾಸಿಗಳಾಗಿದ್ದು, ಇಬ್ಬರೂ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ನಡುವೆ ಹಿಬ್ಸುಲ್ಲಾ ಒಂದೂವರೆ ವರ್ಷದ ಹಿಂದೆ ಹಾಸನಕ್ಕೆ ಬಂದು ಪೆನ್ಷನ್ ಮೊಹಲ್ಲಾದಲ್ಲಿ ವಾಸವಿದ್ದ ಎನ್ನಲಾಗಿದೆ.

ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು ಎಂದು ಹೇಳಲಾಗುತ್ತಿದ್ದು, ಭಾನುವಾರ ಹಾಸನಕ್ಕೆ ಬಂದಿದ್ದ ಸುಷ್ಮಾ ಇಂದು ತನ್ನ ಪ್ರಿಯಕರ ಹಿಬ್ಸುಲ್ಲಾ ಜೊತೆ ಸೇರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅಕ್ಕಪಕ್ಕದವರು ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಇಬ್ಬರಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...