alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ನೇಹಿತನ ಮನೆಯಲ್ಲಿ ದುಡುಕಿದ ಪ್ರೇಮಿಗಳು

ಬೆಂಗಳೂರು: ಮದುವೆಯಾಗಲು ಮನೆ ಬಿಟ್ಟು ಹೋಗಿದ್ದ ಪ್ರೇಮಿಗಳು ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕು ಕೆ. ಗೊಲ್ಲಳ್ಳಿಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹಳೆಯೂರು ಗ್ರಾಮದವರಾದ 25 ವರ್ಷದ ಯುವಕ, 22 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡವರು.

ನಿನ್ನೆ ಸಂಜೆ ಮದುವೆಯಾಗಲು ಮನೆ ಬಿಟ್ಟು ಬಂದು ಸ್ನೇಹಿತನ ಮನೆಯಲ್ಲಿ ತಂಗಿದ್ದಾರೆ. ಮಗಳು ಮನೆ ಬಿಟ್ಟು ಹೋಗಿದ್ದರಿಂದ ಆಘಾತಗೊಂಡ ಯುವತಿಯ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ಆಘಾತಕ್ಕೆ ಒಳಗಾದ ಪ್ರೇಮಿಗಳು ಸ್ನೇಹಿತನ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಗ್ಗಲಿಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...