alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯತಮನೊಂದಿಗೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹರಪನಹಳ್ಳಿ: ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡುತ್ತಿದ್ದ ಬಾಲಕಿ ತನ್ನ ಪ್ರಿಯಕರನೊಂದಿಗೆ ಜಮೀನಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಕಂಚಿಕೇರಿ ಗ್ರಾಮದಲ್ಲಿ ನಡೆದಿದೆ.

ಶಶಿಕುಮಾರ(23), ಕಾವ್ಯ(16) ಮೃತರು. ಶಶಿ ಕಾವ್ಯಾಳ ಸೋದರಮಾವನಾಗಿದ್ದು, ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಶಶಿಗೆ ಇನ್ನೊಬ್ಬ ಮಾವನ ಮಗಳನ್ನು ಮದುವೆ ಮಾಡಲು ಮನೆಯಲ್ಲಿ ಯೋಚಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಯುವ ಪ್ರೇಮಿಗಳು ಹುಡುಗನ ಜಮೀನಿನಲ್ಲಿ ಒಂದೇ ಮರಕ್ಕೆ ನೇಣ ಕುಣಿಕೆಗೆ ಕೊರಳೊಡ್ಡಿದ್ದಾರೆ.

ಇವರಿಬ್ಬರು ಪ್ರೀತಿಸುವ ವಿಷಯ ಮನೆಯವರಿಗೆ ಗೊತ್ತಿರಲಿಲ್ಲ ಎಂದು ಹೇಳುತ್ತಿದ್ದಾರೆ. ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರೀಶೀಲನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...