alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಾದ್ಯಂತ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

plastic-bags-250x250ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸೇರಿದಂತೆ ಥರ್ಮಾಕೋಲ್ ನಿಂದ ತಯಾರಿಸಿದ ವಸ್ತುಗಳ ಬಳಕೆಗೆ ನಿಷೇಧ ಹೇರುವ ಕಾಯಿದೆ ರಾಜ್ಯದಲ್ಲಿ ಜಾರಿಯಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುವ ಪ್ಲಾಸ್ಟಿಕ್ ಪದಾರ್ಥಗಳ ಮಾರಾಟ, ಸಂಗ್ರಹಣೆ ಮತ್ತು ಬಳಕೆಗೆ ರಾಜ್ಯಾದ್ಯಂತ ನಿಷೇಧ ಜಾರಿಗೊಳಿಸಲಾಗಿದೆ.

ಪರಿಸರ ಸಂರಕ್ಷಣೆಗೆ 1986 ರ ಸೆಕ್ಷನ್ 5 ರಲ್ಲಿನ  ಅಧಿಕಾರವನ್ನು ಬಳಸಿಕೊಂಡು ರಾಜ್ಯ ಸರ್ಕಾರ  ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಅದರಂತೆ ಕಳಪೆ ದರ್ಜೆಯ ಪ್ಲಾಸ್ಟಿಕ್ ವಸ್ತುಗಳು, ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಿಸಿದ ವಸ್ತುಗಳು ಹಾಗೂ ಥರ್ಮಾಕೋಲ್ ವಸ್ತುಗಳಿಗೂ ನಿಷೇಧ ಅನ್ವಯವಾಗುತ್ತದೆ. ಕೆಲವೊಂದು ನಿರ್ದಿಷ್ಟ ಉದ್ದೇಶಕ್ಕಾಗಿ ಪ್ಲಾಸ್ಟಿಕ್ ಬಳಸಲು ಅವಕಾಶ ನೀಡಲಾಗಿದೆ. ಹಾಲು, ಮೊಸರು ಇನ್ನಿತರ ಹೈನೋತ್ಪನ್ನಗಳ ಪ್ಯಾಕಿಂಗ್ ಗೆ ಈ ನಿಯಮ ಅನ್ವಯಿಸುವುದಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...