alex Certify
ಕನ್ನಡ ದುನಿಯಾ       Mobile App
       

Kannada Duniya

ಅಡುಗೆ ಅನಿಲ ಗ್ರಾಹಕರಿಗೆ ಇಲ್ಲಿದೆ ಖುಷಿ ಸುದ್ದಿ !

cylinders_1122005f

ನವದೆಹಲಿ: ಎರಡು ದಿನಗಳ ಹಿಂದಷ್ಟೇ ಪೆಟ್ರೋಲ್ ಬೆಲೆಯನ್ನು ಇಳಿಸಿದ್ದ ತೈಲಕಂಪನಿಗಳು, ಇದೀಗ ಅಡುಗೆ ಅನಿಲ ಬೆಲೆಯನ್ನು ಕೂಡ ಇಳಿಕೆ ಮಾಡಿವೆ. ಸಬ್ಸಿಡಿ ರಹಿತ ಎಲ್.ಪಿ.ಜಿ. ಅಡುಗೆ ಅನಿಲ ಬೆಲೆಯನ್ನು 61.50 ರೂಪಾಯಿ ಇಳಿಕೆ ಮಾಡಲಾಗಿದೆ.

ದೆಹಲಿ ಬೆಲೆಯ ಪ್ರಕಾರ 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಎಲ್.ಪಿ.ಜಿ. ಸಿಲಿಂಡರ್ ಬೆಲೆ 575 ರೂಪಾಯಿಯಿಂದ 513.50 ರೂ.ಗೆ ಇಳಿಕೆಯಾಗಿದೆ. ಅಲ್ಲದೇ, ಸಬ್ಸಿಡಿ ಸಹಿತ ಅಡುಗೆ ಸಿಲಿಂಡರ್ ಬೆಲೆಯನ್ನು ಕೇವಲ 9 ಪೈಸೆ ಇಳಿಕೆ ಮಾಡಲಾಗಿದೆ. ಫೆಬ್ರವರಿ 1ರಂದು ಸಬ್ಸಿಡಿ ರಹಿತ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು 118 ರೂಪಾಯಿ ಇಳಿಕೆ ಮಾಡಲಾಗಿತ್ತು. ಇದೀಗ 61.50 ರೂ ಇಳಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚು, ಕಡಿಮೆ ಮಾಡಲಾಗುತ್ತದೆ.

ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆಗಿಂತ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಭಾರೀ ಇಳಿಕೆಯಾದಂತಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಮುಖವಾಗಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿಯೂ ಇಳಿಕೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...