alex Certify
ಕನ್ನಡ ದುನಿಯಾ       Mobile App
       

Kannada Duniya

“ಅನುರಾಗ್ ತಿವಾರಿ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಸಿದ್ಧ’’

anurag-tiwari-ias_650x400_51494995358

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿದಂತೆ ಸಮಗ್ರ ತನಿಖೆ ನಡೆಸಲು ಸಿದ್ಧ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭರವಸೆ ನೀಡಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆಗೆ ಕರೆ ಮಾಡಿದ ಯೋಗಿ ಶೋಭಾ ಪತ್ರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

ಮೇ.17ರಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ  ಅನುರಾಗ್ ತಿವಾರಿ ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಲಕ್ನೋದ ಹಜರತ್ ಗಂಜ್ ನಲ್ಲಿರುವ ಮೀರಾಬಾಯಿ ಗೆಸ್ಟ ಹೌಸ್ ಬಳಿ ಅವರ ಶವ ಸಿಕ್ಕಿತ್ತು. ನಾಲ್ಕು ವಾರಗಳ ರಜೆ ಮೇಲೆ ತೆರಳಿದ್ದ ಅನುರಾಗ್ ತಿವಾರಿ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದು ಹತ್ಯೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಅನುರಾಗ್ ತಿವಾರಿ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ಆಗ್ರಹಿಸಿ ಶೋಭಾ ಕರಂದ್ಲಾಜೆ ಯೋಗಿಯವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಯೋಗಿ ಇಂದು ಬೆಳಿಗ್ಗೆ ಕರಂದ್ಲಾಜೆಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಸಿಬಿಐ ತನಿಖೆ ನಡೆಸುವ ಬೇಡಿಕೆಯಿಟ್ಟು ಪತ್ರ ಬರೆದಲ್ಲಿ ಅದಕ್ಕೂ ಸಿದ್ಧ ಎಂದು ಯೋಗಿ ತಿಳಿಸಿದ್ದಾರೆ. ಈಗಾಗಲೇ ಅನುರಾಗ್ ತಿವಾರಿ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು ಶೀಘ್ರದಲ್ಲಿ ಪ್ರಕರಣ ಬೇಧಿಸುವುದಾಗಿ ಯೋಗಿ ಭರವಸೆ ನೀಡಿದ್ದಾರೆ

 

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...