alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಎಂ.ಬಿ. ಪಾಟೀಲ್ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ

acc

ವಿಜಯಪುರ: ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಪ್ರಯಾಣಿಸುತ್ತಿದ್ದ, ಕಾರ್ ಪಲ್ಟಿಯಾಗಿದ್ದು, ಸಚಿವರು ಸೇರಿದಂತೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸಚಿವರು ವಿಜಯಪುರದಿಂದ ಕಾರವಾರ ಸಮೀಪದ ಉಳವಿಗೆ ತೆರಳುತ್ತಿದ್ದರು. ಕೆರೂರು ಪಟ್ಟಣದ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ, ಟೈಯರ್ ಸ್ಪೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿದೆ.

ಕಾರಿನಲ್ಲಿ ಸಚಿವ ಎಂ.ಬಿ.ಪಾಟೀಲ್, ಚಾಲಕ ಶಂಕರ್, ಗನ್ ಮ್ಯಾನ್ ಬಿ. ಮಹಾಂತೇಶ್, ಸಿದ್ದಣ್ಣ ಸಕ್ಕರೆ,  ಹಾಗೂ ಪ್ರಸನ್ನ ಪಾಟೀಲ್ ಅವರಿದ್ದು ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ಬಳಿಕ ಸಚಿವರು ಬೇರೆ ಕಾರಿನಲ್ಲಿ ತೆರಳಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...