alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಸಿದ್ಧಗಂಗಾ ಶ್ರೀ ಅಸಮಾಧಾನ

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ಬಗ್ಗೆ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

ಲಿಂಗಾಯತ ಮತ್ತು ವೀರಶೈವ ಒಂದೇ. ಸಮಾಜವನ್ನು ಒಂದುಗೂಡಿಸಿಕೊಂಡು ಹೋಗಬೇಕೆಂದು ಹೇಳಿದ್ದೆ. ನನ್ನ ಹೇಳಿಕೆ ಕುರಿತಾಗಿ ಸಮಾಜದ ಮುಖಂಡರೊಂದಿಗೆ ಚರ್ಚಿಸದೇ ಏಕಾಏಕಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ದುರದೃಷ್ಟಕರ ಎಂದು ಶ್ರೀಗಳು ಹೇಳಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಲಿಂಗಾಯತ ಎಂದು, ನಗರ ಪ್ರದೇಶದಲ್ಲಿ ವೀರಶೈವ ಎಂದು ಕರೆಯಲಾಗುತ್ತದೆ. ಎರಡೂ ಒಂದೇ ಆಗಿದ್ದು, ಸಮಾಜವನ್ನು ಒಡೆಯುವ ಕೆಲಸ ಸರಿಯಲ್ಲ. ಸಮಾಜದ ಮುಖಂಡರು ಈ ಬಗ್ಗೆ ಚರ್ಚಿಸಬೇಕೆಂದು ಸಚಿವರ ಭೇಟಿಯ ಸಂದರ್ಭದಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ.

ಲಿಂಗಾಯತ, ವೀರಶೈವ ಎನ್ನುವುದೇ ಅಪ್ರಸ್ತುತವಾಗಿದೆ. ಇದೇ ಕಾರಣಕ್ಕೆ ಸಮಾಜವನ್ನು ಒಡೆಯಬಾರದು. ಮುಖಂಡರು ಒಟ್ಟಿಗೆ ಕುಳಿತು ಒಮ್ಮತದ ನಿರ್ಧಾರವನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...