alex Certify
ಕನ್ನಡ ದುನಿಯಾ       Mobile App
       

Kannada Duniya

‘ಲಿಂಗಾಯತ ಧರ್ಮಕ್ಕೆ ಸಿದ್ಧಗಂಗಾ ಶ್ರೀ ಬೆಂಬಲ’

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀಗಳೊಂದಿಗೆ ಈ ವಿಚಾರವಾಗಿ ಚರ್ಚಿಸಿದ್ದು, ಅವರು ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ನಡೆಯುತ್ತಿರುವ ಹೋರಾಟದ ಕುರಿತಾಗಿ ಮಾಹಿತಿ ಪಡೆದು, ವೀರಶೈವ ಇತ್ತೀಚೆಗೆ ಬಂದಿದ್ದಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಎಂ.ಬಿ. ಪಾಟೀಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ನಾವು ನಡೆಸುತ್ತಿರುವ ಹೋರಾಟಕ್ಕೆ ಸಿದ್ಧಗಂಗಾ ಶ್ರೀಗಳು ಬೆಂಬಲ ನೀಡಿರುವುದು ನಮಗೆ ಸಂತಸ ತಂದಿದೆ. ನಮ್ಮ ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...