alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ.ವೈ.ಎಸ್.ಪಿ. ಗಣಪತಿ ಪ್ರಕರಣ: ಸರ್ಕಾರಕ್ಕೆ ನೋಟಿಸ್

ganapati-dy

ನವದೆಹಲಿ: ಮಡಿಕೇರಿಯಲ್ಲಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕೆಂದು ಕೋರಿ, ಗಣಪತಿ ಅವರ ತಂದೆ ಕುಶಾಲಪ್ಪ ಅವರು, ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾ. ಆದರ್ಶ ಕುಮಾರ್ ಗೋಯೆಲ್ ಅವರ ಪೀಠದಲ್ಲಿ ನಡೆದಿದೆ.

ಗಣಪತಿ ಅವರ ಪ್ರಕರಣವನ್ನು ಸಿ.ಬಿ.ಐ.ಗೆ ಏಕೆ ವಹಿಸಬಾರದು ಎಂದು ಕೇಳಿ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗಿದೆ.

ಮಂಗಳೂರು ಐ.ಜಿ ಕಚೇರಿಯಲ್ಲಿ ಡಿ.ವೈ.ಎಸ್.ಪಿ.ಯಾಗಿದ್ದ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮೊದಲು ತಮ್ಮ ಸಾವಿಗೆ ಕಾರಣರಾದವರ ಹೆಸರನ್ನು ಹೇಳಿದ್ದು, ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣದ ತನಿಖೆ ನಡೆಸಿ ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.

ಈಗ ಸುಪ್ರೀಂ ಕೋರ್ಟ್, ಸಿ.ಬಿ.ಐ. ತನಿಖೆಗೆ ಏಕೆ ವಹಿಸಬಾರದೆಂದು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...