alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಯಿಂದ ದೂರವಾಗ್ತಾರಂತೆ ಎಂ.ಪಿ. ರವೀಂದ್ರ

ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರ ಪುತ್ರ, ದಾವಣಗೆರೆ ಜಿಲ್ಲೆ ಹರಪನಹಳ್ಳಿ ಕ್ಷೇತ್ರದ ಶಾಸಕ ಎಂ.ಪಿ. ರವೀಂದ್ರ ಅವರು ಚುನಾವಣೆ ರಾಜಕೀಯದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ.

ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತು ಚುನಾವಣಾ ರಾಜಕೀಯದಿಂದ ದೂರ ಉಳಿಯಲಿದ್ದೇನೆ. ಸಹಕಾರ ಕ್ಷೇತ್ರದಲ್ಲಿ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.

ನಾನು ಪಲಾಯನವಾದಿಯಲ್ಲ, ಕಾಂಗ್ರೆಸ್ ತೊರೆದು ಬೇರೆ ಪಕ್ಷವನ್ನು ಸೇರುತ್ತಿಲ್ಲ. ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ. ಪಕ್ಷದ ಕೆಲಸವನ್ನು ಮಾಡುತ್ತೇನೆ. ಕಿಂಗ್ ಆಗುವುದಕ್ಕಿಂತ ಕಿಂಗ್ ಮೇಕರ್ ಆಗಿರುತ್ತೇನೆ. ಆದರೆ, ಚುನಾವಣೆ ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದು ಹೇಳಿದ್ದಾರೆ.

ಟಿಕೆಟ್ ಹಾಗೂ ಹಣಕಾಸಿನ ವಿಚಾರದ ಕಾರಣಕ್ಕೆ ಚುನಾವಣೆಯಿಂದ ಹಿಂದೆ ಸರಿಯುತ್ತಿಲ್ಲ. ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರೊಂದಿಗೆ ಉತ್ತಮ ಸಂಬಂಧವಿದೆ. ಅವರು ನನ್ನನ್ನು ಕಡೆಗಣಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...