alex Certify
ಕನ್ನಡ ದುನಿಯಾ       Mobile App
       

Kannada Duniya

ತಡರಾತ್ರಿ ದೇವೇಗೌಡರ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ

ನವೆಂಬರ್ 3ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಹಿಂದೇಟು ಹಾಕಿದ ಪರಿಣಾಮ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯುವುದು ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ವಿದೇಶ ಪ್ರವಾಸದಿಂದ ಕಳೆದ ರಾತ್ರಿ ಬೆಂಗಳೂರಿಗೆ ಬಂದ ಮಧು ಬಂಗಾರಪ್ಪ, ನೇರವಾಗಿ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಮಾತುಕತೆಯ ವೇಳೆ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರೂ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆಂಬ ಮಾಹಿತಿಯನ್ನು ದೇವೇಗೌಡರು ನೀಡಿದ್ದಾರೆನ್ನಲಾಗಿದೆ.

ಹೀಗಾಗಿ ಮಧು ಬಂಗಾರಪ್ಪನವರು ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದು, ದೇವೇಗೌಡರಿಂದ ಬಿ ಫಾರಂ ಪಡೆದಿರುವವರು ಅವರು ನಾಳೆ ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...